Posts

Showing posts from March, 2008

ಬಯಲು ಸೀಮೆ ಗಾಂಧಿಗೆ ಗೌರವ ಡಾಕ್ಟರೇಟ್

Image
ಬೆಳಗೆರೆ ಕೃಷ್ಣಶಾಸ್ತ್ರಿಯೆಂದೊಡನೆ ನಮ್ಮ ಸೀಮೆಯ ಜನಮನಗಳಲ್ಲಿ ಥಟ್ಟನೆ ಮೂಡುವ ಚಿತ್ರ; ನಿಷ್ಕಲ್ಮಷ ನಗುವಿನ ಶ್ವೇತಧಾರಿಯಾದ ತೊಂಬತ್ತರ ಯುವಕನ ಚಿತ್ರ ! ತಮ್ಮ ಈ ಇಳಿವಯಸ್ಸಿನಲ್ಲಿಯೂ ಪಾದರಸದಂತೆ ಓಡಾಡಿಕೊಂಡು ಸಾಮಾಜಿಕ, ಆಧ್ಯಾತ್ಮಿಕ, ಜಾನಪದ ಹಾಗು ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುವ ಶಾಸ್ತ್ರಿಗಳು ಇಂದಿನ ಯುವಕರಿಗೆ ಆದರ್ಶಪ್ರಾಯರು. ಬೆಳಗೆರೆ ಕೃಷ್ಣಶಾಸ್ತ್ರಿಗಳು 22ರ ಮೇ 1918 ಬೆಳಗೆರೆಯಲ್ಲಿ ಜನಿಸಿದರು. ಇವರ ತಂದೆಯಾದಂತ ಶ್ರೀ ಚಂದ್ರಶೇಖರ ಶಾಸ್ತ್ರಿಗಳು ಆಶುಕವಿಯೂ, ಸಂಸ್ಕೃತ ವಿದ್ವಾಂಸರು, ವೇದ ವಿದ್ಯ ಪಾರಂಗತರಾಗಿದ್ದರು ಆ ವಿದ್ಯೆಯನ್ನು ಹೊಟ್ಟೆಪಾಡಿಗೆ ಬಳಿಸಿಕೊಳ್ಳಬಾರದು! ಎಂಬ ಮನೋಭಾವದ ವಿಶಿಷ್ಠ ವ್ಯಕ್ತಿ! ಇಂಥ ಸಂಧರ್ಭದಲ್ಲಿ, ಇವರ ತಾಯಿ ಶ್ರೀಮತಿ ಅನ್ನಪೂರ್ಣಮ್ಮನವರು ಮನೆತನದ ವಿದ್ಯೆ ಆಯುರ್ವೇದದಿಂದ ಮನೆವೈದ್ಯ ಮಾಡಿ ಇಡಿ ಮನೆಯ ನಿರ್ವಹಣೆಯನ್ನು ನಿಭಾಯಿಸಿದರು. ಕ್ಷೀರಸಾಗರ ಕಾವ್ಯನಾಮ ಖ್ಯಾತಿಯ ನಾಟಕಕಾರ ಹಾಗು ಗಣಿತ ಪ್ರಾಧ್ಯಾಪಕರಾದ ಸೀತಾರಾಮ ಶಾಸ್ತ್ರಿಗಳು ಇವರ ಹಿರಿಯ ಸಹೊದರರು. ನವೋದಯ ಸಾಹಿತ್ಯದ ಪ್ರಥಮ ಕವಿಯತ್ರಿಯೆಂದೆ ಖ್ಯಾತರಾದ ಬೆಳಗೆರೆ ಜಾನಕಮ್ಮ ಹಿರಿಯ ಸಹೊದರಿ ಹಾಗು ಮತ್ತೋರ್ವ ಕತೆಗಾರ್ತಿಯಾದಂತ ಬೆಳಗೆರೆ ಪಾರ್ವತಮ್ಮನವರು ಇವರ ಕಿರಿಯ ಸಹೊದರಿ. ಹೀಗೆ ಸಾಹಿತ್ಯಿಕ ಕುಟುಂಬದಿಂದ ಬಂದ ಕೃಷ್ಣಶಾಸ್ತ್ರಿಗಳು, ಸಹಜವಾಗಿಯೇ ಸಾಹಿತ್ಯದೆಡೆಗೆ ಆಕರ್ಷಿತರಾದರ ಕೃಷ್ಣಶಾಸ್ತ್ರಿಗಳು